Strange is the way of the world!
A beautiful song that haunts me from a couple of days is this mesmerising song from Mysoora Mallige, a composition of KS Na...
ದೀಪವು ನಿನ್ನದೆ ಗಾಳಿಯು ನಿನ್ನದೆ ಆರದಿರಲಿ ಬೆಳಕು
ಕಡಲು ನಿನ್ನದೆ ಹಡಗು ನಿನ್ನದೆ, ಮುಳುಗದಿರಲಿ ಬದುಕು ||
ಕಡಲು ನಿನ್ನದೆ ಹಡಗು ನಿನ್ನದೆ, ಮುಳುಗದಿರಲಿ ಬದುಕು ||
ಬೆಟ್ಟವು ನಿನ್ನದೆ, ಬಯಲು ನಿನ್ನದೆ, ಹಬ್ಬಿ ನಗಲಿ ಪ್ರೀತಿ
ನೆಳಲೋ ಬಿಸಿಲೋ ಎಲ್ಲವೂ ನಿನ್ನದೆ ಇರಲಿ ಏಕರೀತಿ ||
ನೆಳಲೋ ಬಿಸಿಲೋ ಎಲ್ಲವೂ ನಿನ್ನದೆ ಇರಲಿ ಏಕರೀತಿ ||
ಆಗೂಂದು ಸಿಡಿಲು, ಈಗೊಂದು ಮುಗಿಲು ನಿನಗೆ ಅಲಂಕಾರ
ಅಲ್ಲೊಂದು ಹಕ್ಕಿ, ಇಲ್ಲೊಂದು ಮುಗುಳು, ನಿನಗೆ ನಮಸ್ಕಾರ ||
ಅಲ್ಲೊಂದು ಹಕ್ಕಿ, ಇಲ್ಲೊಂದು ಮುಗುಳು, ನಿನಗೆ ನಮಸ್ಕಾರ ||
ಅಲ್ಲಿ ರಣದುಂದುಭಿ, ಇಲ್ಲೊಂದು ವೀಣೆ, ನಿನ್ನ ಪ್ರತಿಧ್ವನಿ
ಆ ಮಹಾಕಾವ್ಯ, ಈ ಭಾವಗೀತೆ ನಿನ್ನ ಪದಧ್ವನಿ ||
ಆ ಮಹಾಕಾವ್ಯ, ಈ ಭಾವಗೀತೆ ನಿನ್ನ ಪದಧ್ವನಿ ||
You can watch it here:
No comments:
Post a Comment